|
ಶ್ರಾವಣದ ಸಂಭ್ರಮಕ್ಕೆ ಸ್ವಾಗತ ಕೋರುವ ಭೀಮನ ಅಮಾವಾಸ್ಯೆ
ಈ ಹಬ್ಬಕ್ಕೆ ಪತಿ ಸಂಜೀವಿನಿ ವ್ರತ ಎಂದು ಹೆಸರು ಬಂದ ಬಗ್ಗೆ ಒಂದು ಕಥೆ ಇದೆ. ಆಸೆಬುರುಕ ಬ್ರಾಹ್ಮಣನೊಬ್ಬ, ಹಣಕ್ಕಾಗಿ ತನ್ನ ಮಗಳ ಮದುವೆಯನ್ನು ರಾಜಕುಮಾರನ ಶವದೊಂದಿಗೆ ನಡೆಸುತ್ತಾನೆ. ಸುರಿಯುತ್ತಿದ್ದ ಮಳೆಯಲ್ಲಿ, ಶವವನ್ನೂ, ಶವವನ್ನು ವರಿಸಿದ ವಧುವನ್ನೂ ರಾಜ ಪರಿವಾರದವರು ನದಿ ತೀರದಲ್ಲಿ ಬಿಟ್ಟು ಹೋಗುತ್ತಾರೆ. ಗಾಡಾಂಧಕಾರದಲ್ಲಿ ಪತಿಯ ಶವದ ಮುಂದೆ ಕುಳಿತು ರೋಸುತ್ತಿದ್ದ ಆ ಸ್ವಾ, ಮರಳಿನಲ್ಲಿ ಶಿವಲಿಂಗ ಮಾಡಿ ಪೂಜಿಸುತ್ತಾಳೆ. ಅವಳ ಭಕ್ತಿಗೆ ಮೆಚ್ಚಿದ ಶಿವಪಾರ್ವತಿಯರು ಪ್ರತ್ಯಕ್ಷಳಾಗಿ ಅವಳ ಪತಿಗೆ ಜೀವದಾನ ನೀಡುತ್ತಾರೆ. ಆ ದಂಪತಿಗೆ ರಾಜ್ಯವೂ ಪ್ರಾಪ್ತಿಯಾಗಿ ಸುಖಶಾಂತಿ ನೆಮ್ಮದಿಯಿಂದ ಜೀವಿಸುತ್ತಾರೆ. ಅಮಾವಾಸ್ಯೆಯ ದಿನ ಆ ಸ್ವಾ ತನ್ನ ಪತಿಯನ್ನು ಬದುಕಿಸುಕೊಳ್ಳಲು ನಡೆಸಿದ ಪೂಜೆಯೇ ಜ್ಯೋತಿ ಭೀಮೇಶ್ವರ ವ್ರತ. ವ್ರತಾಚಾರಣೆಯ ಹಿನ್ನೆಲೆಯ ಬಗ್ಗೆ ಹಿರಿಯರು ಹೀಗೆ ಹೇಳುತ್ತಾರೆ ... ಕುಂಡಿನಿ ಪಟ್ಟಣದಲ್ಲಿ ಪತಿಭಕ್ತಳೂ, ಶಾಸ್ತ್ರಜ್ಞಳೂ, ನಿರ್ಮಲ ಮನದವಳೂ ಆದ ಚಾರುಮತಿ ಎಂಬ ಸ್ವಾ ಇರುತ್ತಾಳೆ. ಈ ಬ್ರಾಹ್ಮಣ ಸ್ವಾಗೆ ಮಹಾಲಕ್ಷ್ಮಿ ಕನಸಿನಲ್ಲಿ ಕಾಣಿಸಿಕೊಂಡು ತನ್ನನ್ನು ನಿರ್ದಿಷ್ಟ ಪ್ರಕಾರವಾಗಿ ಪೂಜಿಸಲು ತಿಳಿಸುತ್ತಾಳೆ. ಅದರಂತೆ ಚಾರುಮತಿ ಮಂಗಳಸ್ನಾನ ಮಾಡಿ, ಅಕ್ಕಿಯಿಂದ ಪರಿವೃತವಾದ ಕಲಶದಲ್ಲಿ ವರಲಕ್ಷ್ಮಿಯನ್ನು ಆವಾಹನೆ ಮಾಡಿ, ಕಲ್ಪೋಕ್ತ ಪ್ರಕಾರ ಸಂಧ್ಯಾಕಾಲದಲ್ಲಿ ಅರ್ಚಿಸಿ, ಬಲಗೈಗೆ ದಾರ ಕಟ್ಟಿಕೊಂಡು ತುಪ್ಪದಿಂದ ಮಾಡಿದ ಭಕ್ಷ್ಯಗಳನ್ನು ಬ್ರಾಹ್ಮಣರಿಗೆ ನಿವೇದಿಸಿ, ಸುಹಾಸಿನಿಯರಿಗೆ ದಕ್ಷಿಣೆ ಸಹಿತ ತಾಂಬೂಲ ನೀಡಿ ವ್ರತವಾಚರಿಸುತ್ತಾಳೆ. ಇದರ ಫಲವಾಗಿ ಅವಳು ಸಕಲ ಸೌಭಾಗ್ಯ ಪಡೆಯುತ್ತಾಳೆ. ಹೀಗಾಗಿ ಇದೇ ಪ್ರಕಾರವಾಗಿ ಸುಹಾಸಿನಿಯರು ಈ ವ್ರತವಾಚರಿಸುತ್ತಾರೆ. ಈ ಪ್ರಕಾರವಾಗಿ ಭೀಮನ ಅಮಾವಾಸ್ಯೆಯ ದಿನ ಹೆಣ್ಣು ಮಕ್ಕಳು ಮತ್ತು ಸುಮಂಗಲಿಯರು ಮಂಗಳಸ್ನಾನ ಮಾಡಿ, ಮಂಟಪ ನಿರ್ಮಿಸಿ, ಅದರಲ್ಲಿ ಧಾನ್ಯರಾಶಿ ಮಾಡಿ, ಅದರ ಮೇಲೆ ದೀಪವನ್ನಿಟ್ಟು, ಗೋಹಿಟ್ಟಿನಿಂದ ಮಾಡಿದ ಭಕ್ಷ್ಯವನ್ನು ನೈವೇದ್ಯ ಮಾಡಿ ಈಶ್ವರನನ್ನು ಆರಾಸುತ್ತಾರೆ. ಹೊಸಿಲ ಮೇಲೆ ಭಂಡಾರ ಇಟ್ಟು ಸೋದರರಿಂದ ಒಡೆಸುವ ಪದ್ಧತಿಯೂ ಇದೆ. ಸಾಮಾನ್ಯವಾಗಿ ಹಲವರು ಶ್ರಾವಣದಲ್ಲಿ ಮಾಂಸ -ಮದ್ಯ ಮುಟ್ಟುವುದಿಲ್ಲ. ಹೀಗಾಗಿ ಭೀಮನ ಅಮಾವಾಸ್ಯೆಯ ದಿನ ಕಡ್ಡಾಯವಾಗಿ ಮಾಂಸದ ಅಡಿಗೆ ಮಾಡುವುದು, ಮದ್ಯ ಸೇವಿಸುವುದು ಕೆಲವುಕಡೆ ಸಂಪ್ರದಾಯವೇ ಆಗಿ ಹೋಗಿದೆ. (ಮುಂದಿನ ಒಂದು ತಿಂಗಳ ಕೋಟಾವನ್ನು ಅಂದೇ ಅಡ್ವಾನ್ಸ್ ಆಗಿ ತೆಗೆದುಕೊಳ್ಳುತ್ತಾರೆ.) | |||