|
ಮುಖಪುಟ
/ಸುದ್ದಿ
ಸಮಾಚಾರ ತಮಿಳುಕವಿ ತಿರುವಳ್ಳುವರ್ ಪ್ರತಿಮೆ ಅನಾವರಣ
ನಂತರ ಮಾತನಾಡಿದ ಅವರು, ಕರ್ನಾಟಕದಲ್ಲಿ ತಿರುವಳ್ಳುವರ್ ಪ್ರತಿಮೆ, ತಮಿಳುನಾಡಿನಲ್ಲಿ ಸರ್ವಜ್ಞಮೂರ್ತಿಯ ಪ್ರತಿಮೆ ಅನಾವರಣಗೊಂಡರೆ ಸಾಲದು ಎರಡೂ ರಾಜ್ಯಗಳ ಜನರ ಮನಸುಗಳು ಬೆಸೆಯಬೇಕು ಎಂದರು. ಸರ್ವಜ್ಞ ಹಾಗೂ ತಿರುವಳ್ಳುವರ್ ಯಾವುದೇ ಒಂದು ಭಾಷೆ, ಧರ್ಮ ಅಥವಾ ರಾಜ್ಯಕ್ಕೆ ಸೀಮಿತವಾದವರಲ್ಲ ಎಂದು ಅಭಿಪ್ರಾಯಪಟ್ಟರು. ಬೆಂಗಳೂರಿನಲ್ಲಿ ತಿರುವಳ್ಳುವರ್ ಪ್ರತಿಮೆ ಅನಾವರಣ ಆಗುವತನಕ ಕರ್ನಾಟಕದಲ್ಲಿ ಯಾವುದೇ ಸಾರ್ವಜನಿಕ ಸಮಾರಂಭದಲ್ಲಿ ಪಾಲ್ಗೊಳ್ಳದಿರಲು ತಾವು ಮಾಡಿದ್ದ ಶಪಥ ಈಡೇರಿದೆ ಎಂದರು.
ಕರ್ನಾಟಕ ಹಾಗೂ ತಮಿಳುನಾಡು ನಡುವೆ ಹತ್ತಿರ ಹತ್ತಿರ ಎರಡು ದಶಕಗಳಿಂದ ಉಲ್ಭಣಿಸುತ್ತಿರುವ ಸಂಘರ್ಷಗಳಿಗೆ ತೆರೆ ಎಳೆಯುವ ನಿಟ್ಟಿನಲ್ಲಿ ಎರಡೂ ರಾಜ್ಯಗಳ ಮುಖ್ಯಮಂತ್ರಿಗಳು ಸಮನ್ವಯದ ಹಾದಿ ಹಿಡಿದಿದ್ದು, ಇದರ ಮೊದಲ ಹೆಜ್ಜೆಯಾಗಿ ಇಂದು ರಾಜ್ಯದ ರಾಜಧಾನಿಯಲ್ಲಿ ತಿರುವಳ್ಳುವರ್ ಪ್ರತಿಮೆಯ ಅನಾವರಣ ನೆರವೇರಿತು. ಇದಕ್ಕೆ ಪ್ರತಿಯಾಗಿ ಇದೇ 13ರಂದು ಚೆನ್ನೈನ ಅಯನಾವರಂನಲ್ಲಿ ಕನ್ನಡದ ಕವಿ ಸರ್ವಜ್ಞನ ಪ್ರತಿಮೆಯನ್ನು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನೆರವೇರಿಸಲಿದ್ದು, ಸಿದ್ಧತೆಗಳು ಭರದಿಂದ ಸಾಗಿವೆ. | |||