|
ಮುಖಪುಟ
/ಸುದ್ದಿ
ಸಮಾಚಾರ ಬಿ.ಎಸ್.ವೈ.ಗೆ ಡಾಕ್ಟರೇಟ್ ಪ್ರದಾನ
ನಿನ್ನೆ ಸಂಜೆ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿಗಳಿಗೆ ಡಾಕ್ಟರೇಟ್ ಪ್ರದಾನ ಮಾಡಲಾಯಿತು. ಇದಕ್ಕೂ ಮುನ್ನ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ವಿಶ್ವವಿದ್ಯಾಲಯದ ಆವರಣದಲ್ಲಿ ರಾಣಿ ಚೆನ್ನಮ್ಮಾಜಿಯ ಪುತ್ಥಳಿಯನ್ನು ಅನಾವರಣಗೊಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ, ತಮ್ಮ ವಿದ್ಯಾರ್ಥಿ ದೆಸೆಯಿಂದಲೂ ತಾವು ಸ್ವಾತಂತ್ರ್ಯ ಹೋರಾಟಗಾರರಾದ ಕಿತ್ತೂರು ರಾಣಿ ಚೆನ್ನಮ್ಮ, ಮಹಾತ್ಮಾಗಾಂಧಿ ಮೊದಲಾದವರ ಜೀವನ ಚರಿತ್ರೆಗಳಿಂದ ಪ್ರಭಾವಿತರಾಗಿದ್ದಾಗಿ ತಿಳಿಸಿದರು.
ಪ್ರಸ್ತುತ ಮುಖ್ಯಮಂತ್ರಿಗಳಾಗಿ ಸಾಮಾಜಿಕವಾಗಿ ಹಾಗೂ ಆರ್ಥಿಕವಾಗಿ ಹಿಂದುಳಿದವರ ಏಳಿಗೆಗೆ ಹಲವು ಕಲ್ಯಾಣ ಕಾರ್ಯಕ್ರಮ ರೂಪಿಸಿರುವುದಾಗಿಯೂ ತಿಳಿಸಿದರು. ವಿ.ವಿ.ಯ ಅಧ್ಯಕ್ಷ ಡಾ.ಗಿಲ್ಬರ್ಟ್ ಸನ್, ಡಾ. ಮಹೇಂದ್ರ ಕಂಠಿ ಮತ್ತಿತರರು ಪಾಲ್ಗೊಂಡಿದ್ದರು. | |||