|
ಮುಖಪುಟ
/ಸುದ್ದಿ
ಸಮಾಚಾರ ಸರ್ಕಾರಿ ವಾಹನ ನಾಮಫಲಕದಲ್ಲಿ ಕನ್ನಡ ಕಡ್ಡಾಯ: ಚಂದ್ರು
ತಮ್ಮ ಪ್ರವಾಸ ಸಂದರ್ಭದಲ್ಲಿ ತಾವು ಈ ಉಲ್ಲಂಘನೆಯನ್ನು ಬಹಳಷ್ಟು ಗಮನಿಸಿದ್ದು ಈ ಸಂಬಂಧವಾಗಿ ಮುಖ್ಯ ಕಾರ್ಯದರ್ಶಿಗಳು, ಎಲ್ಲಾ ಇಲಾಖೆಗಳ ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳು, ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಮಹಾನಗರಪಾಲಿಕೆ ಆಯುಕ್ತರು, ವಿಶ್ವವಿದ್ಯಾಲಯದ ಕುಲಪತಿಗಳಿಗೆ ಪತ್ರ ಬರೆದಿದ್ದು ಜನವರಿ ೧ ರೊಳಗೆ ಕಡ್ಡಾಯವಾಗಿ ಬದಲಾವಣೆ ಮಾಡಬೇಕೆಂದು ಸೂಚಿಸಲಾಗಿದೆ ಎಂದರು. ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರ ವಿರುದ್ದ ಶಿಸ್ತುಕ್ರಮ ಜರುಗಿಸಲು ಸಹಾ ತಿಳಿಸಲಾಗಿದೆ. ಇಲ್ಲವಾದಲ್ಲಿ ಮುಂದಿನ ಅಧಿವೇಶನ ಸಮಯದಲ್ಲಿ ಸದನದಲ್ಲಿ ಈ ವಿಚಾರವನ್ನು ಪ್ರಸ್ತಾಪಿಸಲಾಗುವುದೆಂದು ತಿಳಿಸಿದರು. ಅಲ್ಲದೆ ಸಾರ್ವಜನಿಕರಲ್ಲಿಯೂ ಜಾಗೃತಿ ಮೂಡಿಸುವ ಮೂಲಕ ಜನಾಂದೋಲ ಮಾಡುವುದಾಗಿ ತಿಳಿಸಿದರು. | |||