|
ಮುಖಪುಟ
/ಸುದ್ದಿ
ಸಮಾಚಾರ ಸಿಎಂ ರಾಜೀನಾಮೆಗೆ ಸಿದ್ದು ಆಗ್ರಹ
ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ದಾಖಲೆಗಳನ್ನು ನಾಶಮಾಡುವ ಸಾಧ್ಯತೆಯಿರುವುದರಿಂದ ಎಲ್ಲ ದಾಖಲೆ ಸಂರಕ್ಷಿಸಬೇಕು ಎಂದು ಒತ್ತಾಯಿಸಿದರು. ಕಾಂಗ್ರೆಸ್ ಪಕ್ಷ ಕಟ್ಟಾ ಸುಬ್ರಮಣ್ಯ ನಾಯ್ಡು ಹಾಗೂ ಅವರ ಕುಟುಂಬಕ್ಕೆ ಸಂಬಂಧಿಸಿದ ಹಲವಾರು ಅವ್ಯವಹಾರದ ಕುರಿತು ದಾಖಲೆ ಹೊಂದಿದ್ದು ಇಷ್ಟರಲ್ಲೇ ಅವುಗಳನ್ನು ಬಹಿರಂಗಪಡಿಸುವುದಾಗಿ ತಿಳಿಸಿದರು. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿಯು ಹಲವಾರು ಭೂ ಹಗರಣಗಳಿಗೆ ಕಾರಣವಾಗಿದ್ದು, ಈ ಸಂಸ್ಥೆಯನ್ನು ತಕ್ಷಣ ಮುಚ್ಚಬೇಕೆಂದೂ ಸಿದ್ದರಾಮಯ್ಯ ಆಗ್ರಹಿಸಿದರು. ಇನ್ನು ಮುಂದೆ ಕೈಗಾರಿಕೆಗಳಿಗೆ ಬೇಕಾಗುವ ಅಗತ್ಯ ಭೂಮಿಯನ್ನು ರೈತರಿಂದ ನೇರವಾಗಿ ಖರೀದಿಸುವ ವ್ಯವಸ್ಥೆ ಬರಬೇಕು. ಈ ದಿಕ್ಕಿನಲ್ಲಿ ಉಚ್ಚ ನ್ಯಾಯಾಲಯದ ಅನಿಸಿಕೆಯನ್ನು ಸರ್ಕಾರ ಪರಿಗಣಿಸಬೇಕೆಂದು ಅಭಿಪ್ರಾಯಪಟ್ಟರು. | |||