|
ಮುಖಪುಟ
/ಸುದ್ದಿ
ಸಮಾಚಾರ ಚಿತ್ರರಂಗ ಮಹೋನ್ನತವಾಗಿ ಬೆಳಗಬೇಕು – ಯಡಿಯೂರಪ್ಪ
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಬೆಂಗಳೂರು ಅರಮನೆ ಆವರಣದಲ್ಲಿ ಹಮ್ಮಿಕೊಂಡಿರುವ ಮೂರು ದಿನಗಳ ಕನ್ನಡ ವಾಕ್ ಚಿತ್ರರಂಗದ ಅಮೃತ ಮಹೋತ್ಸವ ಸಮಾರಂಭಕ್ಕೆ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು. ಬೆಂಗಳೂರಿನಲ್ಲಿ ಅಮೃತ ಮಹೋತ್ಸವ ಭವನ ನಿರ್ಮಾಣಕ್ಕೆ 5 ಕೋಟಿ ರೂಪಾಯಿ ನೀಡುವ ವಾಗ್ದಾನ ನೀಡಿದರು. ಸದಬಿರುಚಿಯ 50 ಕನ್ನಡ ಚಿತ್ರಗಳಿಗೆ ಪ್ರತಿವರ್ಷ 10 ಲಕ್ಷ ರೂಪಾಯಿ ಅನುದಾನ ನೀಡಲು ಎರಡು ಕೋಟಿ ರೂಪಾಯಿ ಹೆಚ್ಚುವರಿಯಾಗಿ ಒದಗಿಸುವುದಾಗಿ ಹೇಳಿದರು. ಕನ್ನಡ ಚಿತ್ರರಂಗದ ಏಳಿಗೆಗೆ ದುಡಿದ ಹಿರಿಯರ ಸೇವೆಯನ್ನು ಸ್ಮರಿಸಿದ ಅವರು, ಕಲೆ, ಸಂಸ್ಕೃತಿ ನಾಡಿನ ಆಸ್ತಿ. ಕಲೆಯನ್ನು ಪೋಷಿಸಬೇಕಾದ್ದು ಸರ್ಕಾರದ ಕರ್ತವ್ಯ. ರಾಜ್ಯ ಸರ್ಕಾರ ಆ ಕಾರ್ಯವನ್ನು ಮಾಡುತ್ತಿದೆ. ಬಜೆಟ್ ನಲ್ಲಿ ಚಿತ್ರರಂಗಕ್ಕೆ ಸಾಕಷ್ಟು ಪ್ರೋತ್ಸಾಹ ನೀಡಿದೆ ಎಂದರು.
ಚಿತ್ರನಟರಾದ ವಿಷ್ಣುವರ್ಧನ್, ಬಿ. ಸರೋಜಾದೇವಿ, ಅಂಬರೀಶ್, ಶ್ರೀನಾಥ್, ಮುಖ್ಯಮಂತ್ರಿ ಚಂದ್ರು, ಸಚಿವರಾದ ಶೋಭಾ ಕರಂದ್ಲಾಜೆ, ಜನಾರ್ದನ ರೆಡ್ಡಿ, ಆರ್. ಅಶೋಕ್, ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಮತ್ತಿತರರು ಪಾಲ್ಗೊಂಡಿದ್ದರು. | |||