|
ಮುಖಪುಟ
/ಸುದ್ದಿ
ಸಮಾಚಾರ ಕಂಪ್ಯೂಟರ್ ಇಂಜಿನಿಯರ್ ಹುದ್ದೆಗೆ ಅರ್ಜಿ ಆಹ್ವಾನ ಬೆಂಗಳೂರು ನವೆಂಬರ್ ೨೫: ಪೌರಾಡಳಿತ ಇಲಾಖೆಯಲ್ಲಿ ತಾತ್ಕಾಲಿಕ ನೇಮಕಕ್ಕಾಗಿ ಕಂಪ್ಯೂಟರ್ ಇಂಜಿನಿಯರ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಬಿ.ಇ. ಕಂಪ್ಯೂಟರ್ ಸೈನ್ಸ್ ಅಥವಾ ಎಂ.ಸಿ.ಎ. ಉತ್ತೀರ್ಣರಾಗಿ ಎರಡು ವರ್ಷಗಳ ಸಾಫ್ಟ್ವೇರ್ನಲ್ಲಿ ಅನುಭವವಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. dmablr@yahoo.co.in ಇ ಮೇಲ್ ಮುಖಾಂತರ ಸಹ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ವಿವರಗಳಿಗೆ ನಿರ್ದೇಶಕರು, ಪೌರಾಡಳಿತ ಇಲಾಖೆ, ೯ನೇ ಮಹಡಿ, ವಿ.ವಿ. ಟವರ್, ಡಾ: ಅಂಬೇಡ್ಕರ್ ವೀಧಿ, ಬೆಂಗಳೂರು -೫೬೦ ೦೦೧ ಇವರನ್ನು ಸಂಪರ್ಕಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಡಿಸೆಂಬರ್ ೫ ಕಡೆಯ ದಿನವಾಗಿರುತ್ತದೆ. | |||