|
ಮುಖಪುಟ
/ಸುದ್ದಿ
ಸಮಾಚಾರ ಶೀಘ್ರವೇ ಸಂಪುಟ ಪುನಾರಚನೆ
ಪ್ರಸಕ್ತ ಸಂಪುಟದಲ್ಲಿರುವ ಕೆಲವರನ್ನು ಪಕ್ಷದ ಬಲವರ್ಧನೆಗಾಗಿ ಬಳಸಿಕೊಳ್ಳಲು ಹಾಗೂ ಪಕ್ಷದ ಹಿರಿಯರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲು ನಿರ್ಧರಿಸಲಾಗಿದೆ. ಈ ಸಂಬಂಧ ಪಕ್ಷದ ವರಿಷ್ಠರೊಂದಿಗೆ ಮಾತುಕತೆಗಳು ನಡೆಯುತ್ತಿದೆ. ಮುಖ್ಯಮಂತ್ರಿಗಳು ವಿದೇಶದಿಂದ ಹಿಂತಿರುಗಿದ ಬಳಿಕ ಅವರೊಂದಿಗೆ ಮೊದಲು ಮಾತುಕತೆ ನಡೆಸಿ, ಸಂಪುಟ ವಿಸ್ತರಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಪಕ್ಷದ ಸಂಘಟನೆಗೆ ಹಾಗೂ ಸರ್ಕಾರದ ಬಲವರ್ಧನೆಗೆ ಆದ್ಯತೆ ನೀಡಲು ತೀರ್ಮಾನಿಸಲಾಗಿದೆ. ಯಾವುದೇ ಕಾರಣಕ್ಕೂ ಪಕ್ಷದಲ್ಲಿ ಅಶಿಸ್ತು ಸಹಿಸುವುದಿಲ್ಲ ಎಂದು ಅಪಸ್ವರ ತೆಗೆದಿರುವ ಶಾಸಕ ಬೇಳೂರು ಗೋಪಾಲಕೃಷ್ಣ ಸೇರಿದಂತೆ ಯಾರ ಹೆಸರನ್ನೂ ಹೇಳದೆ ಎಚ್ಚರಿಕೆ ನೀಡಿದರು. | |||