|
ಮುಖಪುಟ
/ಸುದ್ದಿ
ಸಮಾಚಾರ
ಯಡಿಯೂರಪ್ಪ ಅವರಿಗೆ ಚುನಾವಣಾ ಆಯೋಗದ ನೋಟಿಸ್
ಚುನಾವಣೆ ದಿನಾಂಕ ಪ್ರಕಟವಾದ ಬಳಿಕ ನೀಡಿದ ಈ ಹೇಳಿಕೆ ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂಬ ಹಿನ್ನೆಲೆಯಲ್ಲಿ ಈ ನೋಟಿಸ್ ನೀಡಲಾಗಿದ್ದು, ನಾಡಿದ್ದು (ಸೆ.೬) ಬೆಳಗ್ಗೆ ೧೧ ಗಂಟೆಯೊಳಗೆ ವಿವರಣೆ ನೀಡುವಂತೆ ಸೂಚಿಸಲಾಗಿದೆ. ಹುಬ್ಬಳ್ಳಿಯಲ್ಲಿ ಯಡಿಯೂರಪ್ಪ ಈ ಸಂಬಂಧ ಹೇಳಿಕೆ ನೀಡಿದ್ದಾರೆ ಎಂಬ ಹಿನ್ನೆಲೆಯಲ್ಲಿ ಸ್ವಯಂ ದೂರು ದಾಖಲಿಸಿಕೊಂಡ ಚುನಾವಣಾ ಆಯೋಗ, ಎರಡೂ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಂದ ವರದಿ ತರಿಸಿಕೊಂಡು ಕೇಂದ್ರ ಚುನಾವಣಾ ಆಯೋಗಕ್ಕೆ ಕಳುಹಿಸಿತ್ತು. ಕೇಂದ್ರ ಚುನಾವಣಾ ಆಯೋಗ ಇಂದು ಯಡಿಯೂರಪ್ಪ ಅವರಿಗೆ ನೋಟಿಸ್ ನೀಡಿದ್ದು, ಮುಖ್ಯಮಂತ್ರಿ ಯಾವ ರೀತಿ ಸಮಜಾಯಿಷಿ ನೀಡುತ್ತಾರೆ ಎಂಬ ಬಗ್ಗೆ ಕುತೂಹಲ ಮೂಡಿದೆ. ಪ್ರತಿಪಕ್ಷಗಳು ಚುನಾವಣಾ ಸಂದರ್ಭದಲ್ಲಿ ರಾಜಕೀಯ ಲಾಭಕ್ಕಾಗಿ ಮುಖ್ಯಮಂತ್ರಿ ಇಂಥ ಆಶ್ವಾಸನೆ ನೀಡಿದ್ದಾರೆ ಎಂದು ಆರೋಪಿಸಿದ ಸಂದರ್ಭದಲ್ಲಿ ಸಮಜಾಯಿಷಿ ನೀಡಿದ್ದ ಯಡಿಯೂರಪ್ಪ, ಈ ವಿಚಾರ ಬೆಳಗಾವಿ ಅಧಿವೇಶನದಲ್ಲಿ ಚರ್ಚೆಗೆ ಬಂದಿತ್ತು ಎಂದಷ್ಟೇ ತಿಳಿಸಿದ್ದಾಗಿ ಸ್ಪಷ್ಟಪಡಿಸಿದ್ದರು ಎಂಬುದನ್ನು ಇಲ್ಲಿ ಸ್ಮರಿಸಬಹುದು.
| |||