|
ಮುಖಪುಟ
/ಸುದ್ದಿ
ಸಮಾಚಾರ ಡಿಸೆಂಬರ್ ನಲ್ಲಿ 77ನೇ ಕನ್ನಡ ಸಾಹಿತ್ಯ ಸಮ್ಮೇಳನ
ಕನ್ನಡ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷರಾಗಿ ನೇಮಕಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅಶೋಕ್, ಮೂರು ದಿನಗಳ ಕಾಲ ನಡೆಯಲಿರುವ ಈ ಬಾರಿಯ ಸಮ್ಮೇಳನಕ್ಕೆ ೫ ಲಕ್ಷ ಜನ ಆಗಮಿಸುವ ನಿರೀಕ್ಷೆ ಇದೆ ಎಂದರು. ಪ್ರತಿ ಬಾರಿ ಸಾಹಿತ್ಯ ಸಮ್ಮೇಳನ ನಡೆದಾಗಲೂ ಸರ್ಕಾರ ಒಂದು ಕೋಟಿ ರೂಪಾಯಿ ಅನುದಾನ ನೀಡುತ್ತಿತ್ತು. ಈ ಬಾರಿ ಅದನ್ನು ೧.೫ ಕೋಟಿ ರೂಪಾಯಿಗೇರಿಸಲಾಗುವುದು, ಐ.ಟಿ.ಬಿ.ಟಿ ಜನರಿಂದ ಕೂಡ ಕನ್ನಡ ಹಬ್ಬಕ್ಕೆ ದೇಣಿಗೆ ಸಂಗ್ರಹಿಸಲಾಗುವುದು. ಸಮ್ಮೇಳನ ಮುಗಿದ ಬಳಿಕ ಉಳಿವ ಹಣದಿಂದ ಬೆಂಗಳೂರಿನಲ್ಲಿ ಶಾಶ್ವತವಾಗಿ ಸಮ್ಮೇಳನದ ನೆನಪಿನ ಸ್ಮಾರಕ ಭವನ ನಿರ್ಮಿಸಲಾಗುವುದು ಎಂದು ಅವರು ಹೇಳಿದರು. ಬಿಬಿಎಂಪಿ ವತಿಯಿಂದ ೧ ಕೋಟಿ ರೂಪಾಯಿ, ಶಾಸಕರು, ಸಚಿವರು ತಿಂಗಳ ವೇತನ ದೇಣಿಗೆ ನೀಡಲಿದ್ದಾರೆ ಎಂದು ಅಶೋಕ್ ಸ್ಪಷ್ಟಪಡಿಸಿದರು. ಎಲ್ಲ ೨೮ ವಿಧಾನಸಭೆ ಕ್ಷೇತ್ರದಲ್ಲಿ “ನುಡಿ ತೇರು’ ಜಾಥಾ ಆಯೋಜಿಸಲಾಗುವುದು. ಈ ಬಾರಿಯ ಸಮ್ಮೇಳನದಲ್ಲಿ ಊಟೋಪಚಾರದ ಕಡೆಗೂ ಹೆಚ್ಚಿನ ಗಮನ ಹರಿಸಲಾಗುವುದು ಎಂದು ಅಶೋಕ್ ತಿಳಿಸಿದರು. ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ನಲ್ಲೂರ್ ಪ್ರಸಾದ್, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು, ಸಚಿವರು, ಶಾಸಕರು ಸಭೆಯಲ್ಲಿ ಹಾಜರಿದ್ದರು. | |||